ಸುದ್ದಿ ಪೋರ್ಟಲ್

Deamweb News

ತಾಜಾ ಸುದ್ದಿ
ಇತ್ತೀಚಿನ ಸುದ್ದಿಗಳನ್ನು ಲೋಡ್ ಮಾಡಲಾಗುತ್ತಿದೆ...

ಮುಖಪುಟ / ಸುದ್ದಿ ವಿವರ

ಹೊಸನಗರ :ನೀರು ಕೇಳಿ ಸಿನಿಮಾ ಸ್ಟೈಲ್ ಕಳ್ಳತನ… ಅದೇ ವೇಗದಲ್ಲಿ ಪೊಲೀಸ್ ಕಾರ್ಯಾಚರಣೆ| ಕೇವಲ 6 ಗಂಟೆಯಲ್ಲೆ ಅಂದರ್!



 ಹೊಸನಗರ: ತಾಲ್ಲೂಕಿನ ಸೊನಲೆ ಗ್ರಾಮದಲ್ಲಿ ಮಹಿಳೆಯೊಬ್ಬರ ಚಿನ್ನದ ಸರ ಕಳವು ಮಾಡಿದ ಇಬ್ಬರು ಆರೋಪಿಗಳನ್ನು ಹೊಸನಗರ ಪೊಲೀಸರು ಕೇವಲ ಆರು ಗಂಟೆಗಳೊಳಗೆ ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಂಗಳವಾರ ಬೆಳಿಗ್ಗೆ ಸುಮಾರು 7 ಗಂಟೆಗೆ ಗಾಯತ್ರಿ ಅವರ ಮನೆಗೆ ಬಂದ ಇಬ್ಬರು ವ್ಯಕ್ತಿಗಳು ಕುಡಿಯಲು ನೀರು ಕೇಳುವ ನೆಪದಲ್ಲಿ ಮನೆಯೊಳಗೆ ಪ್ರವೇಶಿಸಿದ್ದಾರೆ. ಈ ವೇಳೆಯಲ್ಲಿ ಕುತ್ತಿಗೆಯಲ್ಲಿದ್ದ ಸುಮಾರು 13 ಗ್ರಾಂ ತೂಕದ ಚಿನ್ನದ ಸರವನ್ನು ಕಳವು ಮಾಡಿಕೊಂಡು ಬೈಕ್‌ನಲ್ಲಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ನಡೆದ ತಕ್ಷಣ ಕುಟುಂಬಸ್ಥರು 112 ಸಹಾಯವಾಣಿಗೆ ಕರೆ ಮಾಡಿ ದೂರು ನೀಡಿದ್ದು, ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣದ ಗಂಭೀರತೆಯನ್ನು ಅರಿತು ಸರ್ಕಲ್ ಇನ್ಸ್‌ಪೆಕ್ಟರ್ ಗೌಡಪ್ಪ ಗೌಡರ್ ಹಾಗೂ ಸಬ್ ಇನ್ಸ್‌ಪೆಕ್ಟರ್ ಶಂಕರಗೌಡ ಪಾಟೀಲ್ ಅವರ ನೇತೃತ್ವದಲ್ಲಿ ವಿಶೇಷ ಪೊಲೀಸ್ ತಂಡ ರಚಿಸಿ ತನಿಖೆ ಕೈಗೊಳ್ಳಲಾಯಿತು. ಆರೋಪಿಗಳು ಪರಾರಿಯಾದ ಮಾರ್ಗವನ್ನು ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಸೊನಲೆಯಿಂದ ಸುಮಾರು 7 ಕಿ.ಮೀ. ದೂರದ ತಟ್ಟಿಕೆವಿ ಗ್ರಾಮದ ನೂತನವಾಗಿ ನಿರ್ಮಾಣವಾಗುತ್ತಿದ್ದ ಮನೆಯಲ್ಲಿ ಅಡಗಿ ಕುಳಿತಿದ್ದ  ಆರೋಪಿಗಳನ್ನು ಪತ್ತೆ ಹಚ್ಚಿದರು.ಬಂಧಿತರು ಉಡುಪಿ ಜಿಲ್ಲೆಯ ಮಹಮ್ಮದ್ ಗೌಸಿಫ್ (33) ಹಾಗೂ ಮಂಗಳೂರು ಜಿಲ್ಲೆಯ ರೋಷನ್ (44) ಎಂದು ಗುರುತಿಸಲಾಗಿದೆ. ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ.

ಕೇವಲ ಆರು ಗಂಟೆಗಳಲ್ಲೇ ಆರೋಪಿಗಳನ್ನು ಪತ್ತೆ ಹಚ್ಚಿದ ಹೊಸನಗರ ಪೊಲೀಸ್ ತಂಡದ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ವಿಶೇಷವಾಗಿ ಸರ್ಕಲ್ ಇನ್ಸ್‌ಪೆಕ್ಟರ್ ಗೌಡಪ್ಪ ಗೌಡರ್, ಸಬ್ ಇನ್ಸ್‌ಪೆಕ್ಟರ್ ಶಂಕರಗೌಡ ಪಾಟೀಲ್ ಹಾಗೂ ಪೊಲೀಸ್ ಸಿಬ್ಬಂದಿಯನ್ನು ಹೊಸನಗರ ತಾಲ್ಲೂಕಿನ ಜನತೆ ಅಭಿನಂದಿಸಿದ್ದಾರೆ.

Nandheesh kumar ac
Deamweb News ಪೋರ್ಟಲ್‌ನ ಸಂಪಾದಕೀಯ ಮಂಡಳಿ. ನಿಖರ, ನಿಷ್ಪಕ್ಷಪಾತ ಹಾಗೂ ಕ್ಷಣಕ್ಷಣದ ತಾಜಾ ಸುದ್ದಿಗಳನ್ನು ಒದಗಿಸುವುದು ನಮ್ಮ ಗುರಿ.

ನಿಮ್ಮ ಅಭಿಪ್ರಾಯ ತಿಳಿಸಿ