ಸುದ್ದಿ ಪೋರ್ಟಲ್

Deamweb News

ತಾಜಾ ಸುದ್ದಿ
ಇತ್ತೀಚಿನ ಸುದ್ದಿಗಳನ್ನು ಲೋಡ್ ಮಾಡಲಾಗುತ್ತಿದೆ...

ಮುಖಪುಟ / ಸುದ್ದಿ ವಿವರ

ಭೀಕರ ರಸ್ತೆ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಮೃತ

 


ದಾವಣಗೆರೆ
  : ಜಿಲ್ಲೆ ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಸಮೀಪದ ಡಿಗ್ರಿ ಕಾಲೇಜಿನ ಬಳಿ ಇಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದ ಪರಿಣಾಮ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಮೃತರ ಗುರುತು ಪತ್ತೆ ಮಾಡುವ ಕಾರ್ಯ ನಡೆಯುತ್ತಿದೆ.

ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

Nandheesh kumar ac
Deamweb News ಪೋರ್ಟಲ್‌ನ ಸಂಪಾದಕೀಯ ಮಂಡಳಿ. ನಿಖರ, ನಿಷ್ಪಕ್ಷಪಾತ ಹಾಗೂ ಕ್ಷಣಕ್ಷಣದ ತಾಜಾ ಸುದ್ದಿಗಳನ್ನು ಒದಗಿಸುವುದು ನಮ್ಮ ಗುರಿ.

ನಿಮ್ಮ ಅಭಿಪ್ರಾಯ ತಿಳಿಸಿ