ಮೈಸೂರು : ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಅತ್ಯಂತ ಮನಕಲಕುವ ಘಟನೆಯೊಂದು ನಡೆದಿದ್ದು, ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಪ್ರಾಣ ಕಳೆದುಕೊಂಡಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಹರೀಶ್ ಎಂಬ ವ್ಯಕ್ತಿ ತನ್ನ ಪತ್ನಿ ಹಾಗೂ ಇಬ್ಬರು ಮುಗ್ಧ ಮಕ್ಕಳನ್ನು ಕೊಲೆ ಮಾಡಿ, ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಘಟನೆಯ ವಿವರ:
ಹುಣಸೂರಿನ ಮಾರುತಿ ಬಡಾವಣೆಯಲ್ಲಿ ಈ ದಾರುಣ ಕೃತ್ಯ ನಡೆದಿದೆ. ಮೃತರನ್ನು ಹರೀಶ್ (ಗಂಡ), ನಿಶ್ಚಿತಾ (ಪತ್ನಿ), ಮತ್ತು ಮಕ್ಕಳಾದ ನೆಕ್ಸ ಹಾಗೂ ರಕ್ಷಾ ಎಂದು ಗುರುತಿಸಲಾಗಿದೆ.ಮೃತ ಮಕ್ಕಳ ಪೈಕಿ ನೆಕ್ಸಾ 7ನೇ ತರಗತಿಯಲ್ಲಿ ಹಾಗೂ ರಕ್ಷಾ 1ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು.
ಮಕ್ಕಳಿಗೆ ಪ್ಲಾಸ್ಟರ್ ಹಾಕಿ ಉಸಿರು ನಿಲ್ಲಿಸಿ ತಾನು ಆತ್ಮಹತ್ಯೆ
ಹೆಂಡತಿ ಮತ್ತು ಮಕ್ಕಳ ಮುಖ, ಬಾಯಿ ಹಾಗೂ ಮೂಗಿಗೆ ಪ್ಲಾಸ್ಟರ್ ಸುತ್ತಿ/ಅಂಟಿಸಿ ಉಸಿರುಗಟ್ಟಿಸಿ ಹತ್ಯೆ ಮಾಡಲಾಗಿದೆ. ಆ ನಂತರ ಹರೀಶ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಮಲ್ಲಿಕಾರ್ಜುನ ಬಾಲದಂಡಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಕೌಟುಂಬಿಕ ಕಲಹವೇ ಈ ದುರಂತಕ್ಕೆ ಕಾರಣವಿರಬಹುದು ಎಂದು ಶಂಕಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

ನಿಮ್ಮ ಅಭಿಪ್ರಾಯ ತಿಳಿಸಿ