ಸುದ್ದಿ ಪೋರ್ಟಲ್

Deamweb News

ತಾಜಾ ಸುದ್ದಿ
ಇತ್ತೀಚಿನ ಸುದ್ದಿಗಳನ್ನು ಲೋಡ್ ಮಾಡಲಾಗುತ್ತಿದೆ...

ಮುಖಪುಟ / ಸುದ್ದಿ ವಿವರ

ಶಿವಮೊಗ್ಗ ಇಲಿಯಾಸ್ ನಗರದಲ್ಲಿ ಯುವಕನಿಗೆ ಚಾಕು ಇರಿತ; ಗಂಭೀರ ಗಾಯ

 ಶಿವಮೊಗ್ಗ  : ನಗರದ ಇಲಿಯಾಸ್ ನಗರ ಬಡಾವಣೆಯಲ್ಲಿ ಅಮೀರ್ ಎಂಬ ಯುವಕನೊಬ್ಬನಿಗೆ ಚಾಕುವಿನಿಂದ ಇರಿದ ಘಟನೆ ನಡೆದಿದ್ದು, ಆತ ಗಂಭೀರವಾಗಿ ಗಾಯಗೊಂಡಿದ್ದಾನೆ.

ಗಾಯಗೊಂಡ ಯುವಕನನ್ನು ತಕ್ಷಣವೇ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಯುವಕನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಚಾಕು ಇರಿತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಮಾಹಿತಿ ತಿಳಿದ ತಕ್ಷಣ ದೊಡ್ಡಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.


ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.

Nandheesh kumar ac
Deamweb News ಪೋರ್ಟಲ್‌ನ ಸಂಪಾದಕೀಯ ಮಂಡಳಿ. ನಿಖರ, ನಿಷ್ಪಕ್ಷಪಾತ ಹಾಗೂ ಕ್ಷಣಕ್ಷಣದ ತಾಜಾ ಸುದ್ದಿಗಳನ್ನು ಒದಗಿಸುವುದು ನಮ್ಮ ಗುರಿ.

ನಿಮ್ಮ ಅಭಿಪ್ರಾಯ ತಿಳಿಸಿ