ಸುದ್ದಿ ಪೋರ್ಟಲ್

Deamweb News

ತಾಜಾ ಸುದ್ದಿ
ಇತ್ತೀಚಿನ ಸುದ್ದಿಗಳನ್ನು ಲೋಡ್ ಮಾಡಲಾಗುತ್ತಿದೆ...

ಮುಖಪುಟ / ಸುದ್ದಿ ವಿವರ

ಕೊನೆ ಕ್ಷಣದಲ್ಲಿ ಒಬ್ಬರಿಗೆ ಕೋಕ್ ನೀಡುವ ಸಾಧ್ಯತೆ...ಎಸ್.ಎಸ್.ಮಲ್ಲಿಕಾರ್ಜುನ್ ಗೆ ಸಚಿವ ಸ್ಥಾನ ....

 


ದಾವಣಗೆರೆ : ಸಿಎಂ ಡಿ.ಕೆ.ಶಿವಕುಮಾರ್ ಸಚಿವ ಸಂಪುಟ ವಿಸ್ತರಣೆ ಇಂದು ನಡೆಯಲಿದ್ದು, ದಾವಣಗೆರೆಯಲ್ಲಿ ಒಬ್ಬರಿಗೆ ಕೋಕ್ ನೀಡುವ ಸಾಧ್ಯತೆ ಇದ್ದು, ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಗೆ ಕೊನೆ ಕ್ಷಣದಲ್ಲಿ ಸಚಿವ ಸ್ಥಾನ ನೀಡುವ ಸಾಧ್ಯತೆ ಹೆಚ್ಚಿದೆ.

ಈಗಾಗಲೇ ಹಾಲಿ ಶಾಸಕ, ಎಸ್.ಬಸವಂತಪ್ಪಗೆ ಸಚಿವ ಸ್ಥಾನ ನೀಡಲಾಗಿದ್ದು, ಬದಲಾಗಿ ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಗೆ ಕೊನೆ ಕ್ಷಣದಲ್ಲಿ ಸಚಿವ ಸ್ಥಾನವನ್ನು ಹೈಕಮಾಂಡ್ ನೀಡುವ ಸಾಧ್ಯತೆ ಇದೆ.

ಎಸ್.ಎಸ್.ಮಲ್ಲಿಕಾರ್ಜುನ್ ಮಧ್ಯಕರ್ನಾಟಕದ ಪ್ರಭಾವಿ ನಾಯಕನಾಗಿದ್ದು, ವೀರಶೈವ ಲಿಂಗಾಯತ ಮಹಾಸಭಾದ ಮುಂಚೂಣಿ ನಾಯಕ...ಅಲ್ಲದೇ ಮುಂದಿನ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಎಸ್.ಎಸ್.ಮಲ್ಲಿಕಾರ್ಜುನಗೆ ಸಚಿವ ಸ್ಥಾನವನ್ನು ನೀಡಲಿದೆ ಎಂಬ ಮಾಹಿತಿಯನ್ನು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಇನ್ನು ಪಕ್ಕದ ಜಿಲ್ಲೆ ಶಿವಮೊಗ್ಗದಲ್ಲಿ ಹಾಲಿ ಸಚಿವರಾಗಿದ್ದ ಮಧು ಬಂಗಾರಪ್ಪರಿಗೆ ಸಚಿವ ಸ್ಥಾನ ನೀಡಿರುವ ಕಾರಣ ಬಹುತೇಕ ಎಸ್.ಎಸ್‌.ಮಲ್ಲಿಕಾರ್ಜುನ್ ಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಹೆಚ್ಚಿದೆ.

...


Nandheesh kumar ac
Deamweb News ಪೋರ್ಟಲ್‌ನ ಸಂಪಾದಕೀಯ ಮಂಡಳಿ. ನಿಖರ, ನಿಷ್ಪಕ್ಷಪಾತ ಹಾಗೂ ಕ್ಷಣಕ್ಷಣದ ತಾಜಾ ಸುದ್ದಿಗಳನ್ನು ಒದಗಿಸುವುದು ನಮ್ಮ ಗುರಿ.

ನಿಮ್ಮ ಅಭಿಪ್ರಾಯ ತಿಳಿಸಿ