ಸುದ್ದಿ ಪೋರ್ಟಲ್

Deamweb News

ತಾಜಾ ಸುದ್ದಿ
ಇತ್ತೀಚಿನ ಸುದ್ದಿಗಳನ್ನು ಲೋಡ್ ಮಾಡಲಾಗುತ್ತಿದೆ...

ಮುಖಪುಟ / ಸುದ್ದಿ ವಿವರ

ಹೊನ್ನಾಳಿ : ಸಾಸ್ವೆಹಳ್ಳಿ ಕ್ಯಾಸಿನಕೆರೆ ಬಳಿ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು




ದಾವಣಗೆರೆ : ಜಿಲ್ಲೆಯ ಹೊನ್ನಾಳಿ ತಾಲೂಕಿನ ಸಾಸ್ವೆಹಳ್ಳಿ ಹೋಬಳಿಯ ಕ್ಯಾಸಿನಕೆರೆ ಸಮೀಪ ಇಂದು ಬೆಳಿಗ್ಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೈರನಹಳ್ಳಿ ಗ್ರಾಮದ 31 ವರ್ಷದ ಶಶಿಕುಮಾರ ಮೃತ ದುರ್ದೈವಿ. ತಮ್ಮ ಗ್ರಾಮದ ಕಾಲೇಜು ವಿದ್ಯಾರ್ಥಿನಿ ಹಾಗೂ ಸಂಬಂಧಿ ಜಿ.ಎಂ. ಕೀರ್ತಿ ಅವರನ್ನು ಭದ್ರಾವತಿ ತಾಲೂಕಿನ ಆನವೇರಿ ಗ್ರಾಮದ ಕಾಲೇಜಿಗೆ ಬಿಡಲು ತೆರಳುತ್ತಿದ್ದ ವೇಳೆ, ಕ್ಯಾಸಿನಕೆರೆ ಮತ್ತು ಹುಣಸಘಟ್ಟ ಗ್ರಾಮದ ಮಧ್ಯೆ ಎದುರಿನಿಂದ ಬಂದ ಗೂಡ್ಸ್ ವಾಹನ ಬೈಕ್‌ಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಶಶಿಕುಮಾರ ಸ್ಥಳದಲ್ಲೇ ಮೃತಪಟ್ಟಿದ್ದು, ಜಿ.ಎಂ. ಕೀರ್ತಿ ತೀವ್ರವಾಗಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಕುರಿತು ಮೃತನ ಸಹೋದರ ಶಿವರಾಜ್ ಕುಮಾರ್ ನೀಡಿದ ದೂರಿನ ಮೇರೆಗೆ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Nandheesh kumar ac
Deamweb News ಪೋರ್ಟಲ್‌ನ ಸಂಪಾದಕೀಯ ಮಂಡಳಿ. ನಿಖರ, ನಿಷ್ಪಕ್ಷಪಾತ ಹಾಗೂ ಕ್ಷಣಕ್ಷಣದ ತಾಜಾ ಸುದ್ದಿಗಳನ್ನು ಒದಗಿಸುವುದು ನಮ್ಮ ಗುರಿ.

ನಿಮ್ಮ ಅಭಿಪ್ರಾಯ ತಿಳಿಸಿ