ಸುದ್ದಿ ಪೋರ್ಟಲ್

Deamweb News

ತಾಜಾ ಸುದ್ದಿ
ಇತ್ತೀಚಿನ ಸುದ್ದಿಗಳನ್ನು ಲೋಡ್ ಮಾಡಲಾಗುತ್ತಿದೆ...

ಮುಖಪುಟ / ಸುದ್ದಿ ವಿವರ

ವೀರಶೈವ ಲಿಂಗಾಯತ ಸಂಘಟನಾ ವೇದಿಕೆ; ಸೆ.22ರಂದು ವೀರಭದ್ರೇಶ್ವರ ಜಯಂತ್ಯೋತ್ಸವ: ಪ್ರದೀಪ್ ಎಲಿ



 ಶಿವಮೊಗ್ಗ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಜಿಲ್ಲಾ ಘಟಕದ ವತಿಯಿಂದ ಶ್ರೀ ವೀರಭದ್ರೇಶ್ವರ ಜಯಂತ್ಯೋತ್ಸವ–2026 ಅನ್ನು ಸೆ.22ರಂದು ನಗರದಲ್ಲಿ ಆಯೋಜಿಸಲಾಗಿದೆ ಎಂದು ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಪ್ರದೀಪ್ ಎಲಿ ತಿಳಿಸಿದರು.

ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀಶೈಲ ಜಗದ್ಗುರು ಶ್ರೀ ಶ್ರೀ ಶ್ರೀ 1008 ಡಾ. ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ನಗರದ ಚೌಕಿ ಮಠದ (ವೀರಶೈವ ಕಲ್ಯಾಣ ಮಂದಿರದ ಹಿಂಭಾಗ) ಆವರಣದಲ್ಲಿ ಬೆಳಿಗ್ಗೆ 5ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.

ಬೆಳಿಗ್ಗೆ 5ರಿಂದ 7.30ರವರೆಗೆ ನೋಂದಾಯಿತರಿಗೆ ಇಷ್ಟಲಿಂಗ ಹಾಗೂ ಕರಡಗಿ ನೀಡಿ ಲಿಂಗಧಾರಣೆ ಮಾಡಲಾಗುವುದು. ಬೆಳಿಗ್ಗೆ 7.30ರಿಂದ 10.30ರವರೆಗೆ ಸಂಗೀತಯುಕ್ತ ಇಷ್ಟಲಿಂಗ ಮಹಾಪೂಜೆ ನಡೆಯಲಿದೆ. ಬೆಳಿಗ್ಗೆ 7ಕ್ಕೆ ಗಾಂಧಿಬಜಾರ್‌ನ ಶ್ರೀ ಬಸವೇಶ್ವರ ದೇವಸ್ಥಾನದಿಂದ ಮಹಿಳೆಯರು ಪೂರ್ಣಕುಂಭ ಹೊತ್ತು ಮೆರವಣಿಗೆಯಲ್ಲಿ ಚೌಕಿ ಮಠಕ್ಕೆ ಆಗಮಿಸಲಿದ್ದಾರೆ ಎಂದು ಹೇಳಿದರು.

ಅದೇ ದಿನ ಸಂಜೆ 5ಕ್ಕೆ ಕುವೆಂಪು ರಂಗಮಂದಿರದಲ್ಲಿ ಆಧ್ಯಾತ್ಮಿಕ ಜನಜಾಗೃತಿ ಸಭೆ ಹಾಗೂ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಸಂಸದ ಬಿ.ವೈ. ರಾಘವೇಂದ್ರ ಸಭೆ ಉದ್ಘಾಟಿಸುವರು. ಪ್ರದೀಪ್ ಎಲಿ ಅಧ್ಯಕ್ಷತೆ ವಹಿಸುವರು. ವೇದಿಕೆಯ ರಾಷ್ಟ್ರೀಯ ಅಧ್ಯಕ್ಷ ಪ್ರದೀಪ್ ಕಂಕನವಾಡಿ ಗೌರವ ಉಪಸ್ಥಿತರಿರುವರು.

ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಡಾ. ಧನಂಜಯ ಸರ್ಜಿ, ಬಿ.ಕೆ. ಸಂಗಮೇಶ್ವರ, ಬಿ.ವೈ. ವಿಜಯೇಂದ್ರ ಸೇರಿದಂತೆ ಎಸ್. ರುದ್ರೇಗೌಡ, ಎಸ್.ಪಿ. ದಿನೇಶ್, ರುದ್ರಮುನಿ ಎನ್. ಸಜ್ಜನ್, ವಿರೂಪಾಕ್ಷ ಜವಳಿ, ಆಯನೂರು ಮಂಜುನಾಥ, ಎಚ್.ಸಿ. ಯೋಗೀಶ್, ಬಳ್ಳಿಕೆರೆ ಸಂತೋಷ್ ಸೇರಿದಂತೆ ಗಣ್ಯರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದರು.

ವೇದಿಕೆಯ ಪ್ರಮುಖರಾದ ಕೆ.ಬಿ. ಉಮೇಶ್, ಎಂ. ಮುತ್ತಣ್ಣ, ಟಿ.ಎಸ್. ಸಿದ್ದೇಶ್, ಶಿವಕುಮಾರ್, ಶಾರದಮ್ಮ, ಲೋಲಮ್ಮ, ಬಿ.ಜಿ. ಧನಂಜಯ್, ರಮೇಶ್ ಮಲ್ಲಿಗೆನಹಳ್ಳಿ ಹಾಗೂ ಕಿರಣ್ (ವಕೀಲರು) ಉಪಸ್ಥಿತರಿದ್ದರು.

....

ಎಸ್.ಎಸ್. ಜ್ಯೋತಿಪ್ರಕಾಶ್‌ಗೆ ವೀರಭದ್ರೇಶ್ವರ ಪ್ರಶಸ್ತಿ

ಸಮಾಜ ಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡವರನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ 2026ರಿಂದ ಪ್ರತಿವರ್ಷ ‘ಶ್ರೀ ವೀರಭದ್ರೇಶ್ವರ ಪ್ರಶಸ್ತಿ’ ನೀಡಲು ಸಂಘಟನಾ ವೇದಿಕೆ ನಿರ್ಧರಿಸಿದೆ ಎಂದು ಪ್ರದೀಪ್ ಎಲಿ ತಿಳಿಸಿದರು.

2026ನೇ ಸಾಲಿನ ಪ್ರಶಸ್ತಿಗೆ ಸಮಾಜ ಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ಎಸ್.ಎಸ್. ಜ್ಯೋತಿಪ್ರಕಾಶ್ ಅವರನ್ನು ಆಯ್ಕೆ ಮಾಡಲಾಗಿದೆ. ಜಯಂತ್ಯೋತ್ಸವದ ಅಂಗವಾಗಿ ನಡೆಯುವ ಕಾರ್ಯಕ್ರಮದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಸಮಾಜದ ಮುಖಂಡರು, ಗಣ್ಯರು ಹಾಗೂ ಭಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.

————————————

Nandheesh kumar ac
Deamweb News ಪೋರ್ಟಲ್‌ನ ಸಂಪಾದಕೀಯ ಮಂಡಳಿ. ನಿಖರ, ನಿಷ್ಪಕ್ಷಪಾತ ಹಾಗೂ ಕ್ಷಣಕ್ಷಣದ ತಾಜಾ ಸುದ್ದಿಗಳನ್ನು ಒದಗಿಸುವುದು ನಮ್ಮ ಗುರಿ.

ನಿಮ್ಮ ಅಭಿಪ್ರಾಯ ತಿಳಿಸಿ