ಶಿವಮೊಗ್ಗ: ನಗರದ ಹೆಮ್ಮೆಯ ಹಾಗೂ ಧಾರ್ಮಿಕ ಭಾವೈಕ್ಯತೆಯ ಪ್ರತೀಕವಾಗಿರುವ ಹಿಂದೂ ಸಂಘಟನಾ ಮಹಾಮಂಡಳಿಯ ಶ್ರೀ ಮಹಾಗಣಪತಿ ವಿಸರ್ಜನಾ ಮಹೋತ್ಸವವು ಶುಕ್ರವಾರ ಅತ್ಯಂತ ವಿಜೃಂಭಣೆಯಿಂದ ಜರುಗಲಿದ್ದು, ಈ ಬೃಹತ್ ಶೋಭಾಯಾತ್ರೆಯನ್ನು ಯಾವುದೇ ಗೊಂದಲಗಳಿಲ್ಲದೆ, ಅತ್ಯಂತ ಸುರಕ್ಷಿತವಾಗಿ ಸಂಪನ್ನಗೊಳಿಸಲು ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ತಿಳಿಸಿದರು.
ಉತ್ಸವದ ಪೂರ್ವಸಿದ್ಧತೆಗಳ ಅಂಗವಾಗಿ ಇಂದು ಹಿಂದೂ ಕೇಸರಿ ಅಲಂಕಾರ ಸಮಿತಿಯ ಮುಖಂಡರು ಹಾಗೂ ಜಿಲ್ಲಾ ರಕ್ಷಣಾಧಿಕಾರಿಗಳೊಂದಿಗೆ ಜಂಟಿ ಸಭೆ ನಡೆಸಿದ ಶಾಸಕರು, ಮೆರವಣಿಗೆ ಸಾಗುವ ಸ್ಥಳದಲ್ಲಿ ಸಾರ್ವಜನಿಕ ಸುರಕ್ಷತೆ, ಸಿಸಿಟಿವಿ ಕಣ್ಗಾವಲು, ಸಂಚಾರ ಮಾರ್ಗ ಬದಲಾವಣೆ ಹಾಗೂ ಸೂಕ್ತ ಪೊಲೀಸ್ ಬಂದೋಬಸ್ತ್ ಕುರಿತು ಸವಿಸ್ತಾರವಾಗಿ ಚರ್ಚಿಸಿದರು.
ಸಭೆಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಬಿ, ಶಿವಮೊಗ್ಗ ವ್ಯಾಪ್ತಿಯ ಎಲ್ಲಾ ಪೊಲೀಸ್ ಠಾಣೆಗಳ ಅಧಿಕಾರಿಗಳು ಹಾಗೂ ಕೇಸರಿ ಅಲಂಕಾರ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
==

ನಿಮ್ಮ ಅಭಿಪ್ರಾಯ ತಿಳಿಸಿ