ಭದ್ರಾವತಿ: ಜೇಡಿಕಟ್ಟೆ ಭಾಗದ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸದಿರುವುದನ್ನು ಖಂಡಿಸಿ ವೀರಶೈವ ಸಮಾಜದ ಮುಖಂಡ, ಕೌನ್ಸಿಲರ್ ವಾಗೀಶ್ ನೇತೃತ್ವದಲ್ಲಿ ಬಸ್ ತಡೆದು ಪ್ರತಿಭಟನೆ ನಡೆಸಲಾಯಿತು.
ಜೇಡಿಕಟ್ಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಂದ ಪ್ರತಿನಿತ್ಯ ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಬಸ್ ಸೌಲಭ್ಯಕ್ಕಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಮರ್ಪಕ ಸಮಯದಲ್ಲಿ ಬಸ್ಗಳು ಸಂಚರಿಸದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಶಾಲಾ-ಕಾಲೇಜುಗಳಿಗೆ ತೆರಳಲು ತೊಂದರೆಯಾಗುತ್ತಿದೆ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಪ್ರತಿಭಟನಾಕಾರರು ರಸ್ತೆಯಲ್ಲಿ ಕುಳಿತು ಬಸ್ ಸಂಚಾರ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಸ್ಥಳಕ್ಕೆ ಪೊಲೀಸರು ಆಗಮಿಸಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದರು.
ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಬೆಳಗ್ಗೆ ಹಾಗೂ ಸಂಜೆ ವೇಳೆಯಲ್ಲಿ ಅಗತ್ಯವಿರುವಷ್ಟು ಬಸ್ಗಳನ್ನು ಓಡಿಸಬೇಕು. ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ವಾಗೀಶ್ ಸೇರಿದಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.
ಶಾಲಾ, ಕಾಲೇಜಿಗೆ ಹೋಗಲು ತೊಂದರೆ
ಗ್ರಾಮೀಣ ಭಾಗಗಳಿಂದ ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ಸೌಲಭ್ಯ ಇಲ್ಲದೆ ಪ್ರತಿನಿತ್ಯ ತೊಂದರೆ ಅನುಭವಿಸುವಂತಾಗಿದೆ. ಸಮಯಕ್ಕೆ ಸರಿಯಾಗಿ ಬಸ್ಗಳು ಸಿಗದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಶಾಲಾ ಹಾಗೂ ಕಾಲೇಜುಗಳಿಗೆ ತೆರಳಲು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಬೆಳಗಿನ ಸಮಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಬಸ್ಗಾಗಿ ಕಾಯುತ್ತಿದ್ದರೂ, ಅಗತ್ಯಕ್ಕೆ ತಕ್ಕಂತೆ ಬಸ್ಗಳ ವ್ಯವಸ್ಥೆ ಇಲ್ಲದ ಕಾರಣ ಹಲವು ವಿದ್ಯಾರ್ಥಿಗಳು ಬಸ್ಗಳಲ್ಲಿ ಪ್ರಯಾಣಿಸಲು ಸಾಧ್ಯವಾಗದೆ ತಡವಾಗಿ ಶಾಲಾ-ಕಾಲೇಜುಗಳಿಗೆ ತೆರಳುವಂತಾಗಿದೆ.
ಕೆಲ ಸಂದರ್ಭಗಳಲ್ಲಿ ಬಸ್ಗಳಲ್ಲಿ ಹೆಚ್ಚಿನ ಜನದಟ್ಟಣೆ ಉಂಟಾಗುತ್ತಿದ್ದು, ವಿದ್ಯಾರ್ಥಿಗಳು ಅಪಾಯವನ್ನು ಲೆಕ್ಕಿಸದೆ ಪ್ರಯಾಣಿಸುವ ಪರಿಸ್ಥಿತಿ ಎದುರಾಗಿದೆ.ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಬೆಳಗ್ಗೆ ಮತ್ತು ಸಂಜೆ ಶಾಲಾ-ಕಾಲೇಜುಗಳ ಸಮಯಕ್ಕೆ ಅನುಗುಣವಾಗಿ ಹೆಚ್ಚುವರಿ ಬಸ್ಗಳನ್ನು ಸಂಚರಿಸುವಂತೆ ವಿದ್ಯಾರ್ಥಿಗಳು ಹಾಗೂ ಪೋಷಕರು ಒತ್ತಾಯಿಸಿದ್ದಾರೆ. ಇನ್ನಾದರೂ ಸಂಬಂಧಪಟ್ಟ ಸಾರಿಗೆ ಅಧಿಕಾರಿಗಳು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
...
ಬಾಕ್ಸ್
ಹೆಚ್ಚುವರಿ ಬಸ್ ನೀಡಲು ಆಗ್ರಹ
ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸುವಂತೆ ಹಾಗೂ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ಗಳನ್ನು ಒದಗಿಸುವಂತೆ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಸಾರಿಗೆ ಇಲಾಖೆಗೆ ಆಗ್ರಹಿಸಿದ್ದಾರೆ.ಬೆಳಗಿನ ಮತ್ತು ಸಂಜೆ ವೇಳೆಯಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಸ್ಗಾಗಿ ಕಾಯುತ್ತಿದ್ದು, ಬಸ್ಗಳ ಕೊರತೆಯಿಂದಾಗಿ ಶಾಲಾ-ಕಾಲೇಜುಗಳಿಗೆ ಸಮಯಕ್ಕೆ ಸರಿಯಾಗಿ ತೆರಳಲು ತೊಂದರೆಯಾಗುತ್ತಿದೆ. ಇರುವ ಬಸ್ಗಳಲ್ಲಿ ಹೆಚ್ಚಿನ ಜನದಟ್ಟಣೆ ಉಂಟಾಗುತ್ತಿರುವುದರಿಂದ ವಿದ್ಯಾರ್ಥಿಗಳು ಪರದಾಡುವಂತಾಗಿದೆ.
ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸಮಸ್ಯೆಯನ್ನು ಪರಿಹರಿಸಿ, ವಿದ್ಯಾರ್ಥಿಗಳ ಪ್ರಯಾಣದ ಸಮಯಕ್ಕೆ ಅನುಗುಣವಾಗಿ ಹೆಚ್ಚುವರಿ ಬಸ್ಗಳ ವ್ಯವಸ್ಥೆ ಮಾಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
...
ಸ್ಥಳಕ್ಕೆ ಪೊಲೀಸರ ಭೇಟಿ
ದಿಢೀರ್ ಪ್ರತಿಭಟನೆ ಕೈಗೊಂಡ ಕಾರಣ ನ್ಯೂಟನ್ ಪೊಲೀಸ್ ಠಾಣೆ ಇನ್ಸೆಪೆಕ್ಟರ್ ರಮೇಶ್ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರ ಅಹವಾಲು ಕೇಳಿದರು. ಅಲ್ಲದೇ ಟ್ರಾಫಿಕ್ ಕ್ಲಿಯರ್ ಮಾಡಿ ಕೆಳಗೆ ಇಳಿದಿದ್ದ ಜನರನ್ನು ಬೇರೆ ಬಸ್ ಗೆ ಹತ್ತಿಸಿದರು.
...
ಡಿಪೋ ಮ್ಯಾನೇಜರ್ ಸ್ಥಳಕ್ಕೆ ದೌಡು
ಬಸ್ ತಡೆದು ಪ್ರತಿಭಟನೆ ಮಾಡುತ್ತಿದ್ದಂತೆ ಶಿವಮೊಗ್ಗ ಡಿಪೋ ಮ್ಯಾನೇಜರ್ ಸ್ಥಳಕ್ಕೆ ದೌಡಾಯಿಸಿ ಹೆಚ್ಚುವರಿ ಬಸ್ ಬಿಡುವುದಾಗಿ ಹೇಳಿದರು.
...
ಸರಿಯಾದ ಸಮಯಕ್ಕೆ ಬಸ್ ಬಿಡದೇ ಹೋದರೆ ಹೆದ್ದಾರಿ ಬಂದ್
ಶಿವಮೊಗ್ಗ ಕೆಎಸ್ಆರ್ ಟಿಸಿ ಸರಿಯಾದ ಸಮಯಕ್ಕೆ ಬಸ್ ಬಿಡದೇ ಹೋದರೆ ಹೆದ್ದಾರಿ ಬಂದ್ ಮಾಡುವುದಾಗಿ ಕೌನ್ಸಿಲರ್ ವಾಗೀಶ್ ಡಿಪೋ ಮ್ಯಾನೇಜರ್ ಗೆ ಎಚ್ಚರಿಕೆ ನೀಡಿದರು.











ನಿಮ್ಮ ಅಭಿಪ್ರಾಯ ತಿಳಿಸಿ