ಸುದ್ದಿ ಪೋರ್ಟಲ್

Deamweb News

ತಾಜಾ ಸುದ್ದಿ
ಇತ್ತೀಚಿನ ಸುದ್ದಿಗಳನ್ನು ಲೋಡ್ ಮಾಡಲಾಗುತ್ತಿದೆ...

ಮುಖಪುಟ / ಸುದ್ದಿ ವಿವರ

ಶಿವಮೊಗ್ಗ : ಹೇಮಂತ್ ವರ್ಗಾವಣೆ: ಶಿವಮೊಗ್ಗಕ್ಕೆ ನೂತನ ಸಿಇಓ!



ಶಿವಮೊಗ್ಗ :  ಶಿವಮೊಗ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ರಿಷಿ ಆನಂದ್ ರನ್ನು ನೇಮಕ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ರಿಷಿ ಆನಂದ್ ವಿಜಯಪುರದ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದು, ತಕ್ಷಣವೇ ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಿಇಓ ಆಗಿ ಅಧಿಕಾರ ವಹಿಸಿಕೊಳ್ಳಲು ಇಲಾಖೆ ಆದೇಶಿಸಿದೆ.

ಎನ್.ಹೇಮಂತ್ ಹುಬ್ಬಳ್ಳಿಗೆ ವರ್ಗಾವಣೆ:

ಶಿವಮೊಗ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಎನ್.ಹೇಮಂತ್ ಹುಬ್ಬಳ್ಳಿಗೆ ವರ್ಗಾವಣೆಯಾಗಿದ್ದು, ಅಲ್ಲಿನ ಹೆಸ್ಕಾಂ ಗೆ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.

ಈ ಹಿಂದೆ ಎನ್. ಹೇಮಂತ್ ಜಿಲ್ಲಾ ಪಂಚಾಯತ್ ಸಿಇಓ ಆಗಿ ಮಾತ್ರವಲ್ಲದೆ ಕುವೆಂಪು ಕುಲಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು. ಅಲ್ಲದೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ನಿಂದ ನಡೆಯುವ ಅನೇಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿದ ಕೀರ್ತಿಯು ಇದೆ.

=

Nandheesh kumar ac
Deamweb News ಪೋರ್ಟಲ್‌ನ ಸಂಪಾದಕೀಯ ಮಂಡಳಿ. ನಿಖರ, ನಿಷ್ಪಕ್ಷಪಾತ ಹಾಗೂ ಕ್ಷಣಕ್ಷಣದ ತಾಜಾ ಸುದ್ದಿಗಳನ್ನು ಒದಗಿಸುವುದು ನಮ್ಮ ಗುರಿ.

ನಿಮ್ಮ ಅಭಿಪ್ರಾಯ ತಿಳಿಸಿ